ಶಿವಮೊಗ್ಗ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಪ್ರಿನ್ಸಿಪಾಲರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್. ಇವರು ಚರ್ಚ್ ನ ಫಾದರ್ ಕೂಡ ಆಗಿದ್ದಾರೆ. ಸದ್ಯ ಇವರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರಿಗೆ ಇವರು ಪ್ರೀತಿಸುವ ನಾಟಕವಾಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ವಸತಿ ನಿಲಯದಲ್ಲಿದ್ದರು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ ನಿನ್ನೆ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.