ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅತಿ ವೇಗದ ದ್ವಿಶತಕ ಸಿಡಿಸಿ ದಾಖಲೆ ಬರೆದ ಶಫಾಲಿ ವರ್ಮಾ!

ಶಫಾಲಿ ವರ್ಮಾ ದಾಖಲೆ

Author2 by Author2
June 28, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಟಗಾರ್ತಿ ಶಫಾಲಿ ವರ್ಮಾ ದಾಖಲೆ ಬರೆದಿದ್ದಾರೆ.

ಶಫಾಲಿ ವರ್ಮಾ ದ್ವಿ ಶತಕ ಹಾಗೂ ಸ್ಮೃತಿ ಮಂಧಾನ ಅವರ ಶತಕದ ನೆರವಿನಿಂದಾಗಿ ಭಾರತ ತಂಡ ಬೃಹತ್ ಮೊತ್ತ ದಾಖಲಿಸುವತ್ತ ದಾಪುಗಾಲು ಇಟ್ಟಿದೆ. ಈಗಾಗಲೇ ಭಾರತ ತಂಡ 400 ರನ್ಗಳ ಗಡಿ ದಾಟಿದೆ. ಈ ವೇಳೆ ಸ್ಮೃತಿ ಜೊತೆಗೆ ಮೊದಲ ವಿಕೆಟ್ಗೆ ದಾಖಲೆಯ ದ್ವಿಶತಕದ ಜೊತೆಯಾಟವನ್ನಾಡಿದ್ದ ಶಫಾಲಿ ವರ್ಮಾ ಸ್ಫೋಟಕ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಕೇವಲ 196 ಎಸೆತಗಳಲ್ಲಿ ಶಫಾಲಿ ವರ್ಮಾ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಹೆಸರಿನಲ್ಲಿತ್ತು. 2024 ರಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ 248 ಎಸೆತಗಳಲ್ಲಿ ದ್ವಿಶತಕ ಬಾರಿಸಿದ್ದರು. ಅದಕ್ಕೂ ಮುನ್ನ 2001ರಲ್ಲಿ ಇಂಗ್ಲೆಂಡ್ ವಿರುದ್ಧ 306 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದ ಆಸ್ಟ್ರೇಲಿಯಾದ ಕರೆನ್ ರೋಲ್ಟನ್ ಹೆಸರಿನಲ್ಲಿ ಈ ದಾಖಲೆ ಇತ್ತು. ಆದರೆ, ಈಗ ಶಫಾಲಿ ವರ್ಮಾ ಈ ಎಲ್ಲ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ವರ್ಮಾ ಕೇವಲ 113 ಎಸೆತಗಳಲ್ಲಿ ತಮ್ಮ ಶತಕ ಪೂರ್ಣಗೊಳಿಸಿದರು. ಮತ್ತೋರ್ವ ಆಟಗಾರ್ತಿ ಸ್ಮೃತಿ ಮಂಧಾನ ಕೂಡ ಶತಕ ಸಿಡಿಸಿ ಮಿಂಚಿದರು. ಆ ಬಳಿಕ ವೈಯಕ್ತಿಕ 149 ರನ್ ಕಲೆಹಾಕಿ ಸ್ಮೃತಿ ತಮ್ಮ ಇನ್ನಿಂಗ್ಸ್ ಮುಗಿಸಿದರು. ಸತೀಶ್ ಶುಭಾ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅದಾಗ್ಯೂ ತನ್ನ ಆಟ ಮುಂದುವರೆಸಿದ ಶಫಾಲಿ, ಕೇವಲ 196 ಎಸೆತಗಳಲ್ಲಿ ದ್ವಿಶತಕ ಗಳಿಸಿದರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಮಹಿಳಾ ಕ್ರಿಕೆಟಿಗರು ಮತ್ತು ಭಾರತದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡರು. ಅಂತಿಮವಾಗಿ ಶಫಾಲಿ 197 ಎಸೆತಗಳಲ್ಲಿ 23 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ಗಳ ಸಹಿತ 205 ರನ್ ಗಳಿಸಿ ರನೌಟ್ ಆದರು.

ಇದಕ್ಕೂ ಮುನ್ನ ಶೆಫಾಲಿ ವರ್ಮಾ, ಸ್ಮೃತಿ ಮಂಧಾನ ಜೊತೆಗೂಡಿ 292 ರನ್‌ ಗಳ ದಾಖಲೆಯ ಆರಂಭಿಕ ಜೊತೆಯಾಟದ ಕೊಡುಗೆ ನೀಡಿದ್ದರು. ಇದರೊಂದಿಗೆ ಇಬ್ಬರೂ ಪಾಕಿಸ್ತಾನದ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಸಾಜಿದಾ ಶಾ ಮತ್ತು ಕಿರಣ್ ಬಲೂಚ್ ಹೆಸರಿನಲ್ಲಿತ್ತು. 2004ರಲ್ಲಿ ಈ ಇಬ್ಬರೂ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ವಿಕೆಟ್‌ಗೆ 241 ರನ್ ಗಳಿಸಿದ್ದರು. ಅಲ್ಲದೇ, ಶೆಫಾಲಿ ಮತ್ತು ಮಂಧಾನ ಯಾವುದೇ ವಿಕೆಟ್‌ಗೆ ಅತ್ಯಧಿಕ ರನ್‌ಗಳ ಜೊತೆಯಾಟ ನೀಡಿದ ವಿಶ್ವದ ಎರಡನೇ ಜೋಡಿ ಎನಿಸಿಕೊಂಡಿದ್ದಾರೆ.

Tags: Shafali Verma who wrote the fastest double century CDC record!
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram