ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ ದಾಳ ಬಳಸಿ ಗಂಭೀರ್ ಗೆ ಚೆಕ್ ಮೇಟ್ ನೀಡಿದ ಶಾಹೀದ್ ಆಫ್ರಿದಿ

admin by admin
July 31, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಆಫ್ರಿದಿ ಮತ್ತು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ನಡುವಿನ ಸಂಬಂಧ ಹಾವು – ಮುಂಗೂಸಿ ಥರಾ ಇದೆ. ಮೈದಾನದಲ್ಲಿ ಗಂಭೀರ್ ಮತ್ತು ಆಫ್ರಿಧಿ ಜಗಳ ಮಾಡಿಕೊಂಡಿರುವುದನ್ನು ನೋಡಿದ್ದೇವೆ. ಹಾಗೇ ಸಾಮಾಜಿಕ ಜಾಲ ತಾಣದಲ್ಲೂ ಪದಗಳಲ್ಲಿ ಕಿತ್ತಾಡಿಕೊಂಡಿರುವುದನ್ನು ಸಹ ಗಮನಿಸಿದ್ದೇವೆ.

ಅದೇ ರೀತಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನು ಕಂಡ್ರೆ ಗೌತಮ್ ಗಂಭೀರ್‍ಗೆ ಅಷ್ಟಕ್ಕಷ್ಟೇ..ಗಂಭೀರ್ ಪ್ರಕಾರ ಧೋನಿ ಅದೃಷ್ಟದ ನಾಯಕ. ಧೋನಿ ಗಂಗೂಲಿ ರೀತಿಯಲ್ಲಿ ಟೀಮ್ ಇಂಡಿಯಾವನ್ನು ಬೆಳೆಸಿಲ್ಲ. ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿಲ್ಲ ಎಂದು ಹೇಳಿದ್ದರು. ಧೋನಿ ನಾಯಕತ್ವದಲ್ಲಿ ಗಂಭೀರ್ ಅಡಿದ್ರೂ ಕೂಡ ಧೋನಿ ಜತೆಗೆ ಗಂಭೀರ್ ಸಂಬಂಧ ಚೆನ್ನಾಗಿರಲಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷ್ಯವೇ.
ಇದೀಗ ಆಫ್ರಿದಿ ಗಂಭೀರ್‍ಗೆ ಮತ್ತೊಂದು ರೀತಿಯಲ್ಲಿ ಟಾಂಗ್ ಕೊಟ್ಟಿದ್ದಾರೆ. ಆಫ್ರಿಧಿ ಧೋನಿಯವರನ್ನು ಬೆಂಬಲಿಸಿಕೊಂಡು ಗಂಭೀರ್‍ಗೆ ಉರಿಯುವಂತೆ ಮಾಡಿದ್ದಾರೆ. ಸದಾ ಧೋನಿಯ ಮೇಲೆ ಅಸಮಾಧಾನ ಹೊರಹಾಕುತ್ತಿರುವ ಗಂಭೀರ್ ಗೆ ಆಫ್ರಿದಿ ನೀಡಿರುವ ಹೇಳಿಕೆಯನ್ನು ಅಷ್ಟೊಂದು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಸಂದರ್ಶನವೊಂದರಲ್ಲಿ ಶಾಹಿದ್ ಆಫ್ರಿದಿಗೆ ಪ್ರಶ್ನೆಯೊಂದು ಎದುರಾಗಿತ್ತು. ನಿಮ್ಮ ಪ್ರಕಾರ ಮಹೇಂದ್ರ ಸಿಂಗ್ ಧೋನಿ ಮತ್ತು ರಿಕಿ ಪಾಂಟಿಂಗ್ ನಡುವೆ ಯಾರು ಶ್ರೇಷ್ಠ ನಾಯಕರು ? ಈ ಪ್ರಶ್ನೆಗೆ ಶಾಹೀದ್ ಆಫ್ರಿದಿ ಗಂಭೀರ್ ಅವರನ್ನು ಟಾರ್ಗೆಟ್ ಮಾಡಿಕೊಂಡೇ ಉತ್ತರ ನೀಡಿದ್ದಾರೆ. ನನ್ನ ಪ್ರಕಾರ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಶ್ರೇಷ್ಠ ನಾಯಕ ಎಂದು ಹೇಳಿದ್ದಾರೆ.

ಇಲ್ಲಿ ಶಾಹೀದ್ ಆಫ್ರಿದಿ ಅವರು ಧೋನಿಯವರ ಬಗ್ಗೆ ಗಂಭೀರ್ ನೀಡುತ್ತಿದ್ದ ಹೇಳಿಕೆಗಳನ್ನು ಮುಂದಿಟ್ಟುಕೊಂಡೇ ಈ ರೀತಿಯ ಉತ್ತರ ನೀಡಿದ್ದಾರೆ ಅಂದ್ರೂ ಅಚ್ಚರಿಪಡಬೇಕಾಗಿಲ್ಲ. ಈ ಸಂದರ್ಶನದ ವಿಡಿಯೋ ಈಗ ವೈರಲ್ ಆಗಿದೆ. ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್ ಕೂಡ ಮಾಡುತ್ತಿದ್ದಾರೆ.
ಹಾಗೇ ನೋಡಿದ್ರೆ ಧೋನಿ ಮತ್ತು ಪಾಂಟಿಂಗ್ ಇಬ್ಬರು ಕೂಡ ಶ್ರೇಷ್ಠ ನಾಯಕರೇ. ಇಬ್ಬರ ನಡುವೆ ಹೋಲಿಕೆ ಮಾಡುವುದು ಸರಿಯಲ್ಲ. ಆದ್ರೆ ಶಾಹೀದ್ ಆಫ್ರಿದಿಯ ಪ್ರಕಾರ ಮಹೇಂದ್ರ ಸಿಂಗ್ ಧೋನಿಯ ನಾಯಕತ್ವದಲ್ಲಿ ಅನೇಕ ಯುವ ಕ್ರಿಕೆಟಿಗರು ಬೆಳಕಿಗೆ ಬಂದಿದ್ದಾರೆ. ಹೀಗಾಗಿ ಪಾಂಟಿಂಗ್ ಬದಲು ನಾನು ಧೋನಿಯನ್ನು ಆಯ್ಕೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಗಂಭೀರ್ ಧೋನಿ ನಾಯಕತ್ವದಲ್ಲಿ ಯುವ ಕ್ರಿಕೆಟಿಗರು ಬೆಳಕಿಗೆ ಬರಲಿಲ್ಲ. ಧೋನಿ ನಾಯಕತ್ವಲ್ಲಿದ್ದ ಬಹುತೇಕ ಆಟಗಾರರು ಗಂಗೂಲಿಯ ಬೆಳೆಸಿದ್ದ ಹು

ಡುಗರು. ಹೀಗಾಗಿ ಧೋನಿ ಅದೃಷ್ಟವಂತ ನಾಯಕ ಎಂದು ಹೇಳಿದ್ದರು. ಗಂಭೀರ್ ಹೇಳಿಕೆಗೆ ವಿರುದ್ಧವಾಗಿ ಶಾಹೀದ್ ಆಫ್ರಿದಿ ಧೋನಿ ಯುವ ಕ್ರಿಕೆಟಿಗರನ್ನು ಬೆಳೆಸಿದ್ದಾರೆ ಎಂದು ಹೇಳಿದ್ದಾರೆ. ಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾದ 2007ರ ಟಿ-ಟ್ವೆಂಟಿ ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಇನ್ನು ರಿಕಿ ಪಾಂಟಿಂಗ್ ನಾಯಕತ್ವಲ್ಲಿ ಆಸ್ಟ್ರೇಲಿಯಾದ 2003ರ ಮತ್ತು 2007ರ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಹಾಗೇ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಧೋನಿ ಒಟ್ಟು 332 ಪಂದ್ಯಗಳಿಗೆ ನಾಯಕನಾಗಿದ್ದರು. ಇದ್ರಲ್ಲಿ 178 ಪಂದ್ಯಗಳಲ್ಲಿ ಗೆಲುವು ಹಾಗೂ 120 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. ಆರು ಪಂದ್ಯಗಳು ಟೈ ಆಗಿವೆ/ 15 ಪಂದ್ಯಗಳು ಡ್ರಾಗೊಂಡಿವೆ.

ರಿಕಿ ಪಾಂಟಿಂಗ್ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಒಟ್ಟು 324 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದಾರೆ. ಇದ್ರಲ್ಲಿ 220 ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, 77ಪಂದ್ಯಗಳನ್ನು ಸೋಲು ಅನುಭವಿಸಿದ್ದಾರೆ. 2 ಪಂದ್ಯ ಟೈ ಹಾಗೂ 15 ಪಂದ್ಯಗಳು ಡ್ರಾಗೊಂಡಿವೆ.
ಅಂಕಿ ಅಂಶಗಳು ಏನು ಬೇಕಾದ್ರೂ ಹೇಳಲಿ, ಇಲ್ಲಿ ಶಾಹೀದ್ ಆಫ್ರಿದಿ ಧೋನಿಯವರನ್ನು ಮುಂದಿಟ್ಟುಕೊಂಡು ಗಂಭೀರ್‍ಗೆ ಟಾಂಗ್ ಕೊಟ್ಟಿರುವುದಂತೂ ಸತ್ಯ.

Tags: DHONIgambhirShahid Afridi
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram