Shamanuru shivashankarappa | ಮುಂದಿನ ಮುಖ್ಯಮಂತ್ರಿ ನಾನೇ
ದಾವಣಗೆರೆ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ.ಶಾಮನೂರು ಶಿವಶಂಕರಪ್ಪ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದು ಸದಾ ಮುನ್ನಲೆಗೆ ಬರುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಲಾಗುತ್ತಿದೆ. ಇವರ ಜೊತೆಗೆ ಜಿ.ಪರಮೇಶ್ವರ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೂಡ ಸಿಎಂ ರೇಸ್ ನಲ್ಲಿದ್ದಾರೆ.
ಇದೀಗ ಈ ರೇಸ್ ಗೆ ಶಾಮನೂರು ಶಿವಶಂಕರಪ್ಪ ಎಂಟ್ರಿಕೊಟ್ಟಿದ್ದಾರೆ. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ನಾನು ಮುಖ್ಯಮಂತ್ರಿ ಎಂದಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಎಂದು ಹೇಳಿದ್ದಾರೆ.
ಈ ಹೇಳಿಕೆಯೊಂದಿಗೆ ಶಾಮನೂರು ಶಿವಶಂಕರಪ್ಪ ಹೊಸ ಚರ್ಚೆಗೆ ನಾಂದಿಯಾಡಿದ್ದಾರೆ. shamanuru-shivashankarappa-i-am-the-next-chief-minister









