ಮಂಗಳೂರು: ಇತ್ತೀಚೆಗೆ ಟ್ರೆಂಡ್ ಇರುವ ಪ್ಯಾಂಟ್ ಧರಿಸಿದ್ದ ಯುವಕನಿಗೆ ಅವಮಾನ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಯುವಕ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವವರು ಆತನನ್ನು ಲೇವಡಿ ಮಾಡಿದ್ದಾರೆ. ಮೂವರು ಸ್ನೇಹಿತರು ಸೇರಿ ಯುವಕ ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ನ್ನು ಗೋಣಿಚೀಲದ ಡಬ್ಬಳದಿಂದ ಹೊಲಿದು ಅದರ ವಿಡಿಯೋ ಮಾಡಿ ಅವಮಾನಿಸಿದ್ದಾರೆ. ಹೀಗಾಗಿ ಯುವಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಮನೆಯಲ್ಲಿ ಫಿನಾಯಿಲ್ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.