ಮಂಗಳೂರು: ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕುರಿತು ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿರುವ ಆರೋಪದ ಮೇರೆಗೆ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಿಎಫ್ ಐ ಹಾಗೂ ಎಸ್ ಡಿಪಿಐ ಜೊತೆಗೆ ಗುರುತಿಸಿಕೊಂಡಿರುವ ಮುಹಮ್ಮದ್ ಇಲ್ಯಾಸ್, ಅಬ್ದುಲ್ ಬಶೀರ್ ಬಂಧಿತ ಆರೋಪಿಗಳಾಗಿದ್ದಾರೆ.
ಈ ಆರೋಪಿಗಳು ಫೇಸ್ ಬುಕ್ ಪೇಜ್ ನಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.








