ಬೆಂಗಳೂರು : ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಪ್ಪ ಜಡೆಮ್ಮನವರ್ ಸದ್ಯ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಇವರು ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.
ಶಾಂತಪ್ಪ ಅವರು ಪ್ರತಿದಿನ ಬೆಳಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ತೆರಳುತ್ತಾರೆ. ಆದ್ರೆ ಇದಕ್ಕೂ ಮೊದಲು ಅವರು ಪಶ್ಚಿಮ ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿರುವ ಕಾರ್ಮಿಕರ ಮಕ್ಕಳಿಗೆ ಪಾಠ ಮಾಡುತ್ತಾರೆ. ಸುಮಾರು 30 ಮಕ್ಕಳಿಗೆ ಒಂದು ಗಂಟೆ ಪಾಠ ಮಾಡುತ್ತಾರೆ. ಶಾಲೆಯ ಪಠ್ಯಕ್ಕೆ ಅನುಗುಣವಾಗಿ ಪಾಠ ಮಾಡಲು ಸಾಧ್ಯವಾಗದೇ ಇರುವ ಕಾರಣ, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಗಣಿತದ ಬಗ್ಗೆ ಪಾಠವನ್ನು ಮಾಡುತ್ತಿದ್ದಾರೆ.
ಬೆಂಗಳೂರಿಗೆ ಹೆಚ್ಚು ಕಾರ್ಮಿಕರು ಬರುವುದು ಉತ್ತರ ಕರ್ನಾಟಕ ಬಳ್ಳಾರಿ, ಗದಗ, ಕೊಪ್ಪಳ ಮತ್ತು ರಾಯಚೂರು ಭಾಗಗಳಿಂದ. ನಾನು ಅದೇ ಭಾಗದವನಾದ ಕಾರಣ ಅಲ್ಲಿನ ಕಾರ್ಮಿಕರ ಮಕ್ಕಳ ಕಷ್ಟಗಳೇನು ಎಂಬುದು ನನಗೆ ಚೆನ್ನಾಗಿ ಗೊತ್ತು. ಈ ಕಾರಣಕ್ಕೆ ನಾನು ಈ ಮಕ್ಕಳಿಗೆ ಪಾಠ ಮಾಡಲೂ ನಿರ್ಧಾರ ಮಾಡಿದ್ದೇನೆ ಎಂದು ಶಾಂತಪ್ಪ ತಿಳಿಸಿದ್ದಾರೆ.
https://youtu.be/pDPQuy6Xvhk








