ಬೆಂಗಳೂರು : ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶರತ್ ಬಚ್ಚೇಗೌಡ ಮುಂದಿನ ವಾರ ಕಾಂಗ್ರೆಸ್ ಬಾವುಟ ಹಿಡಿಯಲಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳೇ ತಿಳಿಸಿವೆ.

ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು ಶರತ್ ಬಚ್ಚೇಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.
ಬಿಜೆಪಿಯಿಂದ ಎಂ.ಟಿ.ಬಿ.ನಾಗರಾಜ್ ಅವರು ಸ್ಪರ್ಧಿಯಾಗಿದ್ದರು. ನೀನಾ ನಾನಾ ಎಂಬಂತೆ ನಡೆದ ಚುನಾವಣಾ ಕದನದಲ್ಲಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದರು.
ಆರಂಭದಲ್ಲಿ ಶರತ್ ಬಚ್ಚೇಗೌಡರು ಜೆಡಿಎಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಹೊಸ ಸುದ್ದಿಗಳನ್ನು ಇಲ್ಲಿ ಓದಿ

ಆನಂತರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಶರತ್ ಬಚ್ಚೇಗೌಡರು ಕಾಂಗ್ರೆಸ್ ನತ್ತ ಒಲವು ತೋರಿಸಿದರು.
ಕಾಂಗ್ರೆಸ್ ಸೇರ್ಪಡೆ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಚರ್ಚೆಗಳು ನಡೆದಿವೆ.
ಸದ್ಯದ ಮಾಹಿತಿ ಪ್ರಕಾರ ಮುಂದಿನ ವಾರ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲಿದ್ದಾರೆ.








