ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆಯ ಬರೋಬ್ಬರಿ 65 ದಿನಗಳ ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಹಾಕಿದ್ದು, ಅನೇಕರು ತೀರ್ಪನ್ನು ಸ್ವಾಗತಿಸಿದ್ದಾರೆ.
ಇದರ ಬೆನ್ನಲ್ಲೇ ಎನ್ ಸಿಪಿ ಹಿರಿಯ ನಾಯಕ ಶರದ್ ಪವಾರ್ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. “ ಸಾಮಾಜಿಕ ಹೋರಾಟಗಾರ ನರೇಂದ್ರ ಧಾಬೋಲ್ಕರ್ ಅವರ ಹತ್ಯೆಯ ತನಿಖೆ ಬಗೆಹರಿಯದೇ ಹಾಗೇ ಉಳಿದಿರುವಂತೆಯೇ ಸುಶಾಂತ್ ಸಿಂಗ್ ರಜಪೂರ್ ಆತ್ಮಹತ್ಯೆ ಪ್ರಕರಣವೂ ಕೂಡ ಆಗುವುದಿಲ್ಲ ಎಂಬ ನಂಬಿಕೆಯಿದೆ. ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ, ಸಂಪೂರ್ಣ ಸಹಕಾರ ನೀಡಲು ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರ ಇದನ್ನು ಗೌರವಿಸುತ್ತದೆ ಎನ್ನುವ ಭರವಸೆ ಇದೆ ಎಂದಿದ್ದಾರೆ.