Sharad Yadav : RJD ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿಧನ…
ಜನತಾದಳ(RJD) ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಗುರುವಾರ ರಾತ್ರಿ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷ ವಯಸ್ಸಿನ ಶರದ್ ಯಾದವ್ ಅವರು ಬಹುದಿನಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ದೀರ್ಘಕಾಲದವರೆಗೆ ಉಸಿರಾಟದ ತೊಂದರೆಯಿಂದ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶರದ್ ಯಾದವ್ ಸಾವಿನ ಬಗ್ಗೆ ಅವರ ಪುತ್ರಿ ಸುಭಾಷಿಣಿ ಯಾದವ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಹಿತಿ ನೀಡಿದ್ದಾರೆ.
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಜೈಲು ಪಾಲಾಗಿದ್ದರು….
ಶರದ್ ಯಾದವ್ ಅವರು ಜೈಪ್ರಕಾಶ್ ನಾರಾಯಣ್, ಚೌಧರಿ ಚರಣ್ ಸಿಂಗ್, ರಾಜೀವ್ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ದೀರ್ಘಕಾಲ ರಾಜಕೀಯ ಮಾಡಿದರು. ಶರದ್ ಯಾದವ್ ಒಟ್ಟು ಏಳು ಬಾರಿ ಲೋಕಸಭೆ ಸಂಸದರಾಗಿ ಆಯ್ಕೆಯಾದರು ಮತ್ತು ಮೂರು ಬಾರಿ ರಾಜ್ಯಸಭಾ ಸಂಸದರಾಗಿದ್ದರು. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲಿಗೆ ಹೋಗಿದ್ದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ
ಮಾಜಿ ಕೇಂದ್ರ ಸಚಿವ ಮತ್ತು ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದರು. ಶರದ್ ಯಾದವ್ ಜಿ ಅವರಿಂದ ನಾನು ರಾಜಕೀಯದ ಬಗ್ಗೆ ಸಾಕಷ್ಟು ಕಲಿತಿದ್ದೇನೆ, ಅವರು ಇಂದು ನಮ್ಮ ನಡುವೆ ಇಲ್ಲದಿರುವುದು ತುಂಬಾ ದುಃಖಕರವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಶರದ್ ಯಾದವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ‘ಶರದ್ ಯಾದವ್ ಜಿ ಅವರ ನಿಧನಕ್ಕೆ ತುಂಬಾ ದುಃಖವಾಗಿದೆ. ಅವರ ಸುದೀರ್ಘ ಸಾರ್ವಜನಿಕ ವೃತ್ತಿಜೀವನದಲ್ಲಿ, ಅವರು ಸಂಸದೀಯ ಮತ್ತು ಮಂತ್ರಿಯಾಗಿ ತಮ್ಮನ್ನು ಗುರುತಿಸಿಕೊಂಡರು. ಡಾ. ಲೋಹಿಯಾ ಅವರ ಆದರ್ಶಗಳಿಂದ ಅವರು ಹೆಚ್ಚು ಪ್ರಭಾವಿತರಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ. ಓಂ ಶಾಂತಿ.
Sharad Yadav: RJD chief and former Union Minister Sharad Yadav passed away…