ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಶರತ್ ಬಚ್ಚೇಗೌಡ ಭೇಟಿ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿದ್ದಾರೆ.
ಶರತ್ ಬಚ್ಚೇಗೌಡರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಾರೆ ಅನ್ನೋ ಮಾತುಗಳ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಲೇ ಇವೆ.
`ಕಾಂಗ್ರೆಸ್’ ತೊರೆದ್ರೆ ಸಿ.ಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ..?
ಹೊಸಕೋಟೆಯ ಗಲ್ಲಿಗಳಲ್ಲೂ ಕೂಡ ಇದೇ ಮಾತುಗಳು ಕೇಳಿ ಬರುತ್ತಿವೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗಿತ್ತು.
ಇದಕ್ಕೆ ಎಲ್ಲ ಸಿದ್ಧತೆಗಳು ನಡೆದಿದ್ದವು. ಆದ್ರೆ ಕೆಲ ಕಾರಣಾಂತರಗಳಿಂದ ಈ ಕಾರ್ಯಕ್ರಮ ಮುಂದೂಡಲಾಯಿತು.
ಇದೀಗ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಶರತ್ ಭೇಟಿ ನೀಡಿರೋದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಇನ್ನ ಈ ವೇಳೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಬಿಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಚರ್ಚೆ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ.
ಈ ವೇಳೆ ಮಾಜಿ ಸಚಿವರಾದ ಶ್ರೀ ಕೃಷ್ಣಬೈರೇಗೌಡ ಮತ್ತು ವಿಧಾನ ಪರಿಷತ್ ಸದಸ್ಯ ರವಿ ಅವರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









