BJP ಗೆ ಸೇರ್ಪಡೆಗೊಂಡ ನಟ ಶಶಿಕುಮಾರ್ …
ಸಿನಿಮಾ ನಟ ಶಶಿಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಛೇರಿಯಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕೆಲಸಗಳನ್ನ ಮೆಚ್ಚಿ ಬಿಜೆಪಿ ಗೆ ಬಂದಿರುವುದಾಗಿ ನಟ ಶಶಿಕುಮಾರ್ ಹೇಳಿದ್ದಾರೆ. SC ST ಸಮುದಾಯಕ್ಕೆ ಮೀಸಲಾತಿ ಕೊಟ್ಟ ಮುಖ್ಯಮಂತ್ರಿ ಕಾರ್ಯವೈಖರಿಯನ್ನ ಮೆಚ್ಚಿಕೊಂಡಿರುವುದಾಗಿ ನಟ ಶಶಿಕುಮಾರ್ ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಶಿ ಕುಮಾರ್ ಚಳ್ಳಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿರುವ ಶಶಿಕುಮಾರ್ ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.
ಇಂದು ನಡೆದ ಕಾರ್ಯಕ್ರಮದಲ್ಲಿ ಶಶಿ ಕುಮಾರ್ ಮಾತ್ರವಲ್ಲದೇ ತುಮಕೂರಿನ ಮಾಜಿ ಸಂಸದರಾಗಿದ್ದ ಮದ್ದಹನಮೇಗೌಡರು, ಮಾಜಿ ಐಎಎಸ್ ಅಧಿಕಾರಿ ಬಿ ಎಚ್ ಅನಿಲ್ ಕುಮಾರ್ ಹಾಗೂ ಇನ್ನಿತರರು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
Shashikumar: Actor Shashikumar joined BJP…