ನವದೆಹಲಿ: ಹುತಾತ್ಮ ಯೋಧ, ಕನ್ನಡಿಗ ಪ್ರಾಂಜಲ್ ಗೆ ಶೌರ್ಯ ಪ್ರಶಸ್ತಿ ಘೋಷಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ನಡೆದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರ ಗುಂಡೇಟಿಗೆ ಪ್ರಾಂಜಲ್ ಹುತಾತ್ಮರಾಗಿದ್ದರು.
ಈ ಕನ್ನಡಿಗ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿಯನ್ನು ಈಗ ಘೋಷಿಸಲಾಗಿದೆ.