ಲಾಹೋರ್: ಪಾಕಿಸ್ತಾನದಲ್ಲಿ ಚುನಾವಣೆ ಮುಗಿದು ಹಲವು ದಿನಗಳೇ ಕಳೆದರೂ ಪ್ರಧಾನಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿತ್ತು. ಸದ್ಯ ಮತ್ತೊಮ್ಮೆ ಶೆಹಬಾಜ್ ಷರೀಫ್ ಅಧಿಕಾರ ವಹಿಸಿಕೊಳ್ಳಬಹುದು ಎನ್ನಲಾಗುತ್ತಿದೆ.
ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ 72 ವರ್ಷದ ಶೆಹಬಾಜ್ ಷರೀಫ್ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಸಂಸದೀಯ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ತನ್ನ ಸಹೋದರ ಶೆಹಬಾಜ್ ಹೆಸರನ್ನು ಔಪಚಾರಿಕವಾಗಿ ನಾಮನಿರ್ದೇಶನ ಮಾಡಿದರು. ಹೀಗಾಗಿ ಶೆಹಬಾಜ್ ಷರೀಫ್ ಮತ್ತೊಮ್ಮೆ ಅಧಿಕಾರ ವಹಿಸಿಕೊಳ್ಳುವುದು ಅಧಿಕೃತವಾಗಿ ಘೋಷಣೆಯಾದಂತಾಗಿದೆ.