ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಪ್ರಧಾನಿ ಹಾಗೂ ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ(Sheikh Hasina) ಮತ್ತೊಮ್ಮೆ ಬಾಂಗ್ಲಾ ಜನರ ಮನಸ್ಸು ಗೆದ್ದಿದ್ದಾರೆ.
76 ವರ್ಷದ ಶೇಖ್ ಹಸೀನಾ 2,49,965 ಮತಗಳನ್ನು ಪಡೆದರೆ, ಹತ್ತಿರದ ಸ್ಪರ್ಧಿ ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆಯಲು ಯಶಸ್ವಿಯಾಗಿದ್ದಾರೆ.
ಶೇಖ್ ಹಸೀನಾ ಅವರು 1986 ರಿಂದ ಎಂಟು ಬಾರಿ ಗೆಲುವು ಸಾಧಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಪಡೆದಿದ್ದಾರೆ.
ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಅದರ ಮಿತ್ರಪಕ್ಷಗಳು ಚುನಾವಣೆ ಬಹಿಷ್ಕರಿಸಿದ್ದರು. ಮತದಾನ ನಡೆದ ನಂತರವೇ ಮತ ಏಣಕೆ ನಡೆಯಿತು. 27 ರಾಜಕೀಯ ಪಕ್ಷಗಳಿಂದ 1,500 ಹಾಗೂ 436 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು.








