ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಪಕ್ಷವು ಬಹುಮತಕ್ಕಿಂತ ಹೆಚ್ಚಿನ ಸೀಟುಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ಯಾದಗಿರಿಯಲ್ಲಿ ಬೃಹತ್ ರೋಡ್ ಶೋ ನಡೆಸಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ನಮ್ಮ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದು, ಹೀನಾಯ ಸೋಲು ಅನುಭವಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.