ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗೆ (Darshan) ರಾಜಾತ್ಯಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗನನ್ನು (Wilson Garden Naga) ಕಲಬುರಗಿ ಜೈಲಿಗೆ ಶಿಫ್ಟ್ ಮಾಡಿ ಕೋರ್ಟ್ ಆದೇಶ ನೀಡಿದೆ.
ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಕೋಕಾ ಕೇಸ್ ನಲ್ಲಿ ಬಂಧನ ಆಗಿದ್ದ 20 ಜನರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ನಾಗನ ಮೇಲಿತ್ತು.
ಹೀಗಾಗಿ ನಾಗನನ್ನು ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಕಳೆದ ವರ್ಷ ಆಗಸ್ಟ್ನಲ್ಲಿ ಸಿದ್ದಪುರ ಮಹೇಶ್ನನ್ನ ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೇವಲ ಇನ್ನೂರು ಮೀಟರ್ ಅಂತರದಲ್ಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 20 ಜನರನ್ನು ಬಂಧಿಸಿದ್ದರು. ಜೈಲಿನಲ್ಲಿ ನಾಗನ ತಂಡದ ಫೋಟೋ ಕೂಡ ವೈರಲ್ ಆಗಿತ್ತು.