ಹಾವೇರಿ: ಶಿಗ್ಗಾಂವಿ ಉಪಚುನಾವಣೆ (Shiggaon By Election)ಯಲ್ಲಿ ಕಾಂಗ್ರೆಸ್ ಗೆ ಬಂಡಾಯ ದೊಡ್ಡ ತಲೆ ನೋವಾಗಿತ್ತು. ಆದರೆ, ಈಗ ಬಂಡಾಯ ಶಮನವಾಗಿದೆ. ಹೀಗಾಗಿ ಕಾಂಗ್ರೆಸ್ ಪಾಳಯದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತಿದೆ.
ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ (Ajjappir Khadri) ನಾಮಪತ್ರ ಹಿಂಪಡೆದಿದ್ದಾರೆ. ಹುಬ್ಬಳ್ಳಿಯಿಂದ (Hubballi) ಸಚಿವ ಜಮೀರ್ ಅಹ್ಮದ್ ಖಾನ್ ಜೊತೆ ಆಗಮಿಸಿದ ಖಾದ್ರಿ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿ ನಾಮಪತ್ರ ಹಿಂಪಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸೂಕ್ತ ಸ್ಥಾನ ಮಾನಕ್ಕಾಗಿ ಆಗ್ರಹಿಸಿದ್ದಾರೆ.
ಜಮೀರ್ ಜೊತೆಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಪಕ್ಷದ ಯಾಸಿರ್ಖಾನ್ ಪಠಾಣ್ಗೆ ಬೆಂಬಲ ಸೂಚಿಸಿದರು.