ಶ್ರೀಲಂಕಾದ ತಲುಪಿದ ಶಿಖರ್ ಧವನ್ ಸಾರಥ್ಯದ ಟೀಮ್ ಇಂಡಿಯಾ…!
ರಾಹುಲ್ ದ್ರಾವಿಡ್ ಮಾರ್ಗದರ್ಶನ… ಶಿಖರ್ ಧವನ್ ಸಾರಥ್ಯದ ಟೀಮ್ ಇಂಡಿಯಾ ಶ್ರೀಲಂಕಾಗೆ ತಲುಪಿದೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ. ಜುಲೈ 13ರಿಂದ ಏಕದಿನ ಸರಣಿಯ ಪಂದ್ಯಗಳು ಶುರುವಾಗಲಿದೆ.
ಇದೇ ಮೊದಲ ಬಾರಿ ಶಿಖರ್ ಧವನ್ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ರಾಹುಲ್ ದ್ರಾವಿಡ್ ಹಿರಿಯರ ತಂಡಕ್ಕೆ ಕೋಚ್ ಆಗಿದ್ದಾರೆ. ಕೆಲವು ತಿಂಗಳುಗಳ ಬಳಿಕ ಟೀಮ್ ಇಂಡಿಯಾದ ಹೆಡ್ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಗಿಯಲಿದೆ. ಹಾಗೇ ರವಿಶಾಸ್ತ್ರಿ ಮತ್ತೆ ಮುಂದುವರಿಯುವ ಸಾಧ್ಯತೆಗಳಿಲ್ಲ. ಹೀಗಾಗಿ ರಾಹುಲ್ ದ್ರಾವಿಡ್ ಅವರು ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಪಕ್ಕಾ.
ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಹೆಮ್ಮೆಯನ್ನುಂಟು ಮಾಡುತ್ತಿದೆ. ಅದೇ ರೀತಿ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ನಾನು ಒಂದು ಬಾರಿ ಆಡಿದ್ದೇನೆ. ಭಾರತ ಎ ತಂಡದಲ್ಲಿ ನಾನು ನಾಯಕನಾಗಿದ್ದೆ. ರಾಹುಲ್ ದ್ರಾವಿಡ್ ಕೋಚ್ ಆಗಿದ್ದರು. ತಂಡದಲ್ಲಿ ಯುವ ಆಟಗಾರರು ಇದ್ದಾರೆ. ಅವರ ಪ್ರತಿಭೆ, ಸಾಮಥ್ರ್ಯ ಪ್ರದರ್ಶಿಸಲು ಈ ಸರಣಿ ಉತ್ತಮ ವೇದಿಕೆಯಾಗಿದೆ. ತಂಡ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ನಾಯಕ ಶಿಖರ್ ಧವನ್ ಹೇಳಿದ್ದಾರೆ.
ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೇಶ್ ರಾಣಾ, ಇಶಾನ್ ಕಿಶಾನ್ (ವಿಕೆಟ್ ಕೀಪರ್), ಸಂಜು ಸಾಮ್ಸನ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ. ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುಮನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ.