ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೊತೆ ಜೊತೆಯಲಿ ಖ್ಯಾತಿಯ ಶಿಲ್ಪ ಅಯ್ಯರ್….
ಸ್ಯಾಂಡಲ್ ವುಡ್ ನಲ್ಲಿ ಗಟ್ಟಿ ಮೇಳದ ಸೌಂಡ್ ಜೋರಾಗಿ ಕೇಳಿ ಬರುತ್ತಿದೆ. ಇದೀಗ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಶಿಲ್ಪ ಅಯ್ಯರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಸೇರಿದಂತೆ ಸಾಕಷ್ಟು ಧಾರವಾಹಿಗಳಲ್ಲಿ ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅವರು ವೃತ್ತಿಯಲ್ಲಿ ಲಾಯರ್ ಆಗಿರುವ ಸಚಿನ್ ವಿಶ್ವನಾಥ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ರೇಮಿಗಳ ದಿನಾಚರಣೆಯಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಸೋಶಿಯಲ್ ಮೀಡಿಯಾ ಮುಖಾಂತರ ಪೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ ಸೈಲೆಂಟ್ ಆಗಿ ಮದುವೆಯಾಗಿದ್ದಾರೆ. ಶಿಲ್ಪಾ ಅಯ್ಯರ್- ಸಚಿನ್ ಮದುವೆಗೆ `ಜೊತೆ ಜೊತೆಯಲಿ’ ಟೀಂ ಮತ್ತು ಹಲವು ನಟ-ನಟಿಯರು ಭಾಗಿಯಾಗಿದ್ದರು. ನವಜೋಡಿಗೆ ಕಲಾವಿದರು, ಅಭಿಮಾನಿಗಳು ಶುಭಹಾರೈಸಿದ್ದಾರೆ.
Shilpa Iyer : Shilpa Iyer of the famous Shilpa Iyer joined the married life…