ಅಶ್ಲೀಲ ಸಿನಿಮಾಗಳ ನಿರ್ಮಾಣ – ಜುಲೈ 23ರವರೆಗೂ ಪೊಲೀಸ್ ಕಸ್ಟಡಿಯಲ್ಲಿ ರಾಜ್ ಕುಂದ್ರಾ
ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅಲ್ಲದೇ ರಾಜ್ ಕುಂದ್ರಾ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗ್ತಿದೆ.. ಈ ನಡುವೆ ರಾಜ್ ಕುಂದ್ರಾ ಅವರು ಈ ಹಿಂದೆ ಮಾಡಿದ್ದ ಟ್ವೀಟ್ ಈಗ ಭಾರೀ ವೈರಲ್ ಆಗ್ತಿದೆ.
‘ದಾಸ’ನ ಬೆಂಬಲಕ್ಕೆ ಬಂದ ಆಪ್ತ ಮಿತ್ರ – ಡಿ ಬಾಸ್ ಸಪೋರ್ಟ್ ಗೆ ನಿಂತ ಸೆಲೆಬ್ರಿಟಿಗಳು ಯಾರ್ಯಾರು..?
ಇನ್ನೂ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಜುಲೈ 19ರ ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ ಎಂದಿದ್ದರು.
ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್‌ಗಳನ್ನು ಬಳಸಿ ಮೊಬೈಲ್ ಆಪ್‌ಗಳಿಗೆ ಅಪ್‌ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ ಎಂದಿದ್ದರು.
ದರ್ಶನ್ , ಇಂದ್ರಜಿತ್ ಬಹಿಷ್ಕಾರಕ್ಕೆ ವಾಣಿಜ್ಯ ಮಂಡಳಿಗೆ ಒತ್ತಾಯ..!
ನೀಲಿ ಚಿತ್ರದ ಬಗ್ಗೆ ರಾಜ್ ಕುಂದ್ರಾ ಅವರು 2012ರಲ್ಲಿ ಮಾಡಿದ್ದ ಸುಮಾರು 8 – 9 ವರ್ಷಗಳ ಹಳೆಯ ಟ್ವೀಟ್ ಗಳು ಈಗ ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಟ್ವೀಟ್ ನಲ್ಲಿ ‘ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ’ ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.