ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣ : ರಾಜ್ ಕುಂದ್ರಗೆ ತಪ್ಪದ ಸಂಕಷ್ಟ -27 ರವರೆಗೂ ಪೊಲೀಸ್ ಕಸ್ಟಡಿಗೆ..!
ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ , ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದು, ರಾಜ್ ಕುಂದ್ರ ಪೋರ್ನ್ ವಿಡಿಯೋಗಳ ಕುರಿತಾಗಿ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗ್ತಿವೆ.. ಕೆಲವೊಬ್ರು ರಾಜ್ ಕುಂದ್ರಾ ಪರ ನಿಂತಿದ್ದಾರೆ. ಈ ನಡುವೆ ರಾಜ್ ಕುಂದ್ರ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗ್ತ ಇದ್ದಾರೆ.
ಈ ನಡುವೆ ರಾಜ್ ಕುಂದ್ರಾಗೆ ಮತ್ತೊಂದು ಶಾಕ್ ಸಿಕ್ಕಿದೆ.. ರಾಜ್ ಕುಂದ್ರಾರನ್ನು ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ. ಜುಲೈ 19 ರಂದು ಮುಂಬೈ ಪೊಲೀಸರು ರಾಜ್ ಕುಂದ್ರಾರನ್ನು ಬಂಧಿಸಿದ್ದರು. ಜುಲೈ 23ರವರೆಗೂ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಹಿನ್ನೆಲೆ ಇಂದು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ರಾಜ್ ಕುಂದ್ರಾ ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಇನ್ನು ನಾಲ್ಕು ದಿನ ವಶಕ್ಕೆ ಪಡೆಯುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಫೆಬ್ರವರಿಯಲ್ಲಿ ಪ್ರಕರಣ ದಾಖಲು ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ.
ಈ ಕೇಸ್ನಲ್ಲಿ ರಾಜ್ ಕುಂದ್ರಾ ಜುಲೈ 19 ರಂದು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು. ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.








