ಮಾಧ್ಯಮದವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದ ಶಿಲ್ಪಾ ಶೆಟ್ಟಿಗೆ ನ್ಯಾಯಾಲಯದಲ್ಲಿ ಮುಖಭಂಗ..!
ಮುಂಬೈ : ಅಶ್ಲೀಲ ವಿಡಿಯೋ ನಿರ್ಮಾನ ಪ್ರಕರಣದಲ್ಲಿ ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲು ಸೇರಿದ್ದಾರೆ.. ಆದ್ರೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಶಿಲ್ಪಾ ಶೆಟ್ಟಿ ಅವರ ಹೆಸರನ್ನ ಪದೇ ಪದೇ ಪ್ರಸ್ತಾಪಿಸುತ್ತಾ ಇರೋದಕ್ಕೆ ಶಿಲ್ಪಾ ಶೆಟ್ಟಿ ತಿರುಗಿಬಿದ್ದಿದ್ದರು. ಪ್ರಕರಣ ಆರಂಭದಿಂದಲೂ ಶಿಲ್ಪಾ ಶೆಟ್ಟಿ ಹಾಗೂ ತಂಗಿ ಶಮಿತಾ ಕೂಡ ಕುಂದ್ರಾ ಜೊತೆಗೆ ಟ್ರೋಲ್ ಆಗ್ತಾ ಇದ್ದಾರೆ.. ಹೀಗಾಗಿ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹೌದು.. ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದರು. ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
“ಬಲವಂತವಾಗಿ ಕಿಸ್ ಮಾಡಲು ಬಂದ್ರು, ಹೆದರಿ ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದೆ” – ಕುಂದ್ರಾ ವಿರುದ್ಧ ಶರ್ಲಿನ್ ಆರೋಪ
ಆದ್ರೆ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಾಧ್ಯಮಗಳು ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕೋರ್ಟ್‍ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ವರ್ಷಕ್ಕೆ ಶೇ.18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು. ಈ ಕುರಿತಾಗಿ ಕೋರ್ಟ್ ಶಿಲ್ಪಾ ಶೆಟ್ಟಿಯವರನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ಜಿಎಸ್ ಪಟೇಲ್ ಅವರು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡರು. ಓದುಗರನ್ನು ಸೆಳೆಯಲು ತಪ್ಪಾದ ಸುದ್ದಿ ಪ್ರಕಟ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರು ವಾದ ಮಂಡಿಸಿದರು. ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು. ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ.
ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು ಪೊಲೀಸ್ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ, ಎಂದು ನ್ಯಾಯಮೂರ್ತಿ ಜಿಎಸ್ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ. ರಾಜ್ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ.
BIGGBOSS 8 : ಈ ಸೀಸನ್ ನಲ್ಲಿ ಟ್ರೋಫಿ ಗೆಲ್ಲೋ ಸ್ಪರ್ಧಿ ಯಾರು ಗೊತ್ತಾ …? ಫೈನಲ್ ಪ್ರವೇಶ ಮಾಡೋರು ಇವರೇನಾ..?
ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದ್ರೂ ಶಿಲ್ಪಾಗೆ ಈಗ್ಲೇ ಕ್ಲೀನ್ ಚಿಟ್ ಕೊಡೋದಕ್ಕೆ ಸಾಧ್ಯವಿಲ್ಲಾ ಎಂದಿದ್ದಾರೆ. ಈ ನಡುವೆ ಮಾಧ್ಯಮಗಳಲ್ಲಿ ಪದೇ ಪದೇ ತಮ್ಮ ಹೆಸರನ್ನ ಪ್ರಸ್ತಾಪಿಸುತ್ತಾ ಪ್ರಕರಣದ ಜೊತೆಗೆ ಜೋಡಿಸುತ್ತಿರುವ ಹಿನ್ನೆಲೆ ಶಿಲ್ಪಾ ಆಕ್ರೋಶಗೊಂಡಿದ್ದು, ಮುಂಬೈ ಹೈಕೋರ್ಟ್ ನಲ್ಲಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.