Shilpa Shetty : ಧ್ರುವ – ಪ್ರೇಮ್ ‘ಕೆಡಿ’ ಅಖಾಡದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ..!!
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘KD’ ಯಲ್ಲಿ ಘಾಟಾನುಘಟನಿ ನಟರೇ ಕಾಣಿಸಿಕೊಳ್ತಿದ್ದಾರೆ.
ಈ ಸಿನಿಮಾದಲ್ಲಿ ಬಾಲಿವುಡ್ ನ ಸ್ಟಾರ್ ನಟ KGF ಅಧೀರ ಖ್ಯಾತಿಯ ಸಂಜಯ್ ದತ್ ವಿಲ್ಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಈ ಸಿನಿಮಾದಲ್ಲಿ ಬಾಲಿವುಡ್ ಬ್ಯೂಟಿ , ಕರಾವಳಿಯ ಚೆಲುವೆ ಶಿಲ್ಪಾ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗ್ತಿದೆ..
ಈ ಮೂಲಕ ಬಹಳ ವರ್ಷಗಳ ನಂತರ ಸ್ಯಾಂಡಲ್ ವುಡ್ ಕಮ್ ಬ್ಯಾಕ್ ಮಾಡ್ತಿದ್ದಾರೆ. 1998ರಲ್ಲಿ ಮೊದಲ ಬಾರಿಗೆ ಕನ್ನಡ ಸಿನಿಮಾ ರಂಗಕ್ಕೆ ಬಂದರು.
ಆನಂತರ ಮತ್ತೆ ರವಿಚಂದ್ರನ್ ಅವರ ಜೊತೆ ಒಂದಾಗೋಣ ಬಾ ಚಿತ್ರದಲ್ಲಿ ನಟಿಸಿದರು. 2005ರಲ್ಲಿ ಉಪೇಂದ್ರ ಜೊತೆ ಆಟೋ ಶಂಕರ್ ಚಿತ್ರದಲ್ಲಿ ನಟಿಸಿದರು.
ಅದಾದ ನಂತರ ಈ ವರೆಗೂ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡದತ್ತ ಮುಖ ಮಾಡಿರಲಿಲ್ಲ. ಇದೀಗ ದೃವ ಸರ್ಜಾ ನಟನೆಯ ಪ್ರೇಮ್ ನಿರ್ದೇಶನದ ಸಿನಿಮಾದ ಮೂಲಕ ಮತ್ತೆ ಗಾಂಧಿನಗಕ್ಕೆ ಎಂಟ್ರಿಕೊಡ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಶಿಲ್ಪಾ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗ್ತಿದೆ.
ಈಗಾಗಲೇ ಕೆಡಿ ಸಿನಿಮಾದಲ್ಲಿ ಸಂಜಯ್ ದತ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಎರಡು ಹಂತದ ಚಿತ್ರೀಕರಣಕ್ಕೂ ಅವರು ಬಂದಿದ್ದಾರೆ.
ಈ ಹಿಂದೆ KGF ನಲ್ಲಿ ಬಾಲಿವುಡ್ ಬೆಡಗಿ ರವೀನಾ ತಂಡನ್ ಒಂದು ಪವರ್ ಫುಲ್ ಪಾತ್ರದಲ್ಲಿ ನಟಿಸಿ ಎಲ್ಲರ ಗಮನ ಸೆಳೆದರು. ಈಗ ಶಿಲ್ಪಾ ಅದೇ ರೀತಿಯಾಗಿ ಮೋಡಿ ಮಾಡ್ತಾರಾ ಕಾದು ನೋಡಬೇಕಿದೆ.
Shilpa Shetty to join KD Film set along with Sunjay dutt