ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ವೀವ್ಸ್ ದಾಹಕ್ಕೆ ಅಮಾಯಕ ದೀಪಕ್ ಬಲಿ: ಜೀವ ಹೋದರೂ ಪಶ್ಚಾತ್ತಾಪವಿಲ್ಲದೆ ಮೃತ ದೀಪಕ್ ವಿರುದ್ಧವೇ ದೂರು ನೀಡಿದ ಶಿಮ್ಜಿತಾ ಕೊನೆಗೂ ಅಂದರ್

Shimjita, who filed a complaint against the deceased Deepak, is finally arrested.

Shwetha by Shwetha
January 23, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಕೇರಳ: ಇಂದಿನ ಸೋಶಿಯಲ್ ಮೀಡಿಯಾ ಜಮಾನದಲ್ಲಿ ಕೇವಲ ವೀವ್ಸ್ ಮತ್ತು ಲೈಕ್ಸ್ ಪಡೆಯುವ ಹಪಹಪಿಕೆ ಎಂತಹ ದುರಂತಕ್ಕೆ ಕಾರಣವಾಗಬಹುದು ಎನ್ನುವುದಕ್ಕೆ ಕೇರಳದ ದೀಪಕ್ ಸಾವು ಒಂದು ಜ್ವಲಂತ ಮತ್ತು ಆಘಾತಕಾರಿ ಸಾಕ್ಷಿಯಾಗಿದೆ. ತಾನು ಮಾಡದ ತಪ್ಪಿಗೆ ಸಾರ್ವಜನಿಕವಾಗಿ ಅವಮಾನಿತನಾದ ದೀಪಕ್ ಎಂಬ ಅಮಾಯಕ ಯುವಕ ಮನನೊಂದು ಸಾವಿಗೆ ಶರಣಾಗಿದ್ದು, ಈ ಘಟನೆ ಇಡೀ ದೇಶದ ಜನಸಾಮಾನ್ಯರ ಮನಕಲಕಿದೆ. ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಜಿತಾ ಮುಸ್ತಫಾಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಜೀವ ಹೋದರೂ ಪಶ್ಚಾತ್ತಾಪವಿಲ್ಲ: ಮೃತ ದೀಪಕ್ ವಿರುದ್ಧವೇ ದೂರು

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ತನ್ನ ಸುಳ್ಳು ಆರೋಪ ಮತ್ತು ವಿಡಿಯೋದಿಂದಾಗಿ ಒಬ್ಬ ವ್ಯಕ್ತಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂಬ ಅರಿವಿದ್ದರೂ, ಆರೋಪಿ ಶಿಮ್ಜಿತಾ ಮುಸ್ತಫಾ ಮಾತ್ರ ನಿಕೃಷ್ಟವಾಗಿ ವರ್ತಿಸಿದ್ದಾರೆ. ದೀಪಕ್ ಸಾವಿನ ಬಳಿಕವೂ ಆಕೆಗೆ ಪಶ್ಚಾತ್ತಾಪದ ಲವಲೇಶವೂ ಇಲ್ಲದಿರುವುದು ಆಕೆಯ ಇಮೇಲ್ ದೂರಿನಿಂದ ಸಾಬೀತಾಗಿದೆ. ಬಂಧನ ಭೀತಿಯಲ್ಲಿದ್ದ ಶಿಮ್ಜಿತಾ, ಜನವರಿ 21ರ ರಾತ್ರಿ ಪಯ್ಯನ್ನೂರು ಪೊಲೀಸರಿಗೆ ಇಮೇಲ್ ಮೂಲಕ ದೂರು ರವಾನಿಸಿದ್ದಾಳೆ.

ದೂರಿನಲ್ಲಿ ತಾನು ಪಯ್ಯನ್ನೂರು ರೈಲ್ವೆ ನಿಲ್ದಾಣದಿಂದ ಬಸ್ ಹತ್ತಿದ್ದಾಗ, ಪ್ರಯಾಣದ ವೇಳೆ ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದನು. ಅದಾದ ಬಳಿಕ ನಾನು ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದೆ ಎಂದು ಸಮರ್ಥಿಸಿಕೊಂಡಿದ್ದಾಳೆ. ಆದರೆ ದೂರಿನಲ್ಲಿ ಆ ವ್ಯಕ್ತಿಯ ಹೆಸರನ್ನು ಆಕೆ ಉಲ್ಲೇಖಿಸಿಲ್ಲ. ಸತ್ತ ಮೇಲೂ ವ್ಯಕ್ತಿಯ ಮೇಲೆ ಆರೋಪ ಹೊರಿಸುವ ಈಕೆಯ ನಿರ್ಧಾರ ತನಿಖಾಧಿಕಾರಿಗಳಿಗೂ ಅಚ್ಚರಿ ಮೂಡಿಸಿದೆ.

ವಿದೇಶಕ್ಕೆ ಹಾರಲು ಸಂಚು: ಲುಕ್ ಔಟ್ ನೋಟಿಸ್ ಮತ್ತು ಬಂಧನ

ದೀಪಕ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಶಿಮ್ಜಿತಾ ತಲೆಮರೆಸಿಕೊಂಡಿದ್ದಳು. ಆಕೆಗೆ ವಿದೇಶದಲ್ಲಿ ಪ್ರಭಾವಿ ಸಂಪರ್ಕಗಳಿದ್ದು, ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆಗಳಿದ್ದವು. ಇದನ್ನು ಮನಗಂಡ ಕೇರಳ ಪೊಲೀಸರು ಕೂಡಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.

ತೀವ್ರ ಶೋಧ ಕಾರ್ಯದ ಬಳಿಕ, ವಡಕರದ ಮುತ್ತುಂಗಲ್ ಪಶ್ಚಿಮದಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿ ಶಿಮ್ಜಿತಾ ಅವಿತು ಕುಳಿತಿರುವುದು ಪೊಲೀಸರಿಗೆ ಖಚಿತವಾಯಿತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಕೊಯಿಲಾಂಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಆಕೆಯನ್ನು ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ.

ಏನಿದು ದೀಪಕ್ ಸಾವು ಪ್ರಕರಣ?

ಕೆಲವು ದಿನಗಳ ಹಿಂದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಶಿಮ್ಜಿತಾ, ವ್ಯಕ್ತಿಯೊಬ್ಬ ತನ್ನನ್ನು ಅಸಭ್ಯವಾಗಿ ಮುಟ್ಟುತ್ತಿದ್ದಾನೆ ಎಂದು ಆರೋಪಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ಸತ್ಯಾಸತ್ಯತೆ ಪರಿಶೀಲಿಸದ ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಹಿಗ್ಗಾಮುಗ್ಗಾ ಟೀಕಿಸಿ ಕಮೆಂಟ್ ಮಾಡಿದ್ದರು. ಕ್ಷಣಮಾತ್ರದಲ್ಲಿ ವಿಡಿಯೋ ವೈರಲ್ ಆಗಿ ದೀಪಕ್ ಅವರ ಮಾನ ಹರಾಜಾಗಿತ್ತು.

ತಾನು ಯಾವುದೇ ತಪ್ಪು ಮಾಡದಿದ್ದರೂ, ಸಮಾಜದ ಮುಂದೆ ಅಪರಾಧಿಯಂತೆ ಬಿಂಬಿತನಾದೆ ಎಂದು ನೊಂದ ದೀಪಕ್, ಈ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣಾದರು. ಕೇವಲ ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ಧಿ ಪಡೆಯಲು ಅಮಾಯಕನ ಬಲಿ ಪಡೆದ ಈ ಘಟನೆ ಡಿಜಿಟಲ್ ಯುಗದ ಕರಾಳ ಮುಖವನ್ನು ಅನಾವರಣಗೊಳಿಸಿದೆ.

ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಈ ಪ್ರಕರಣ ಕೇವಲ ದೀಪಕ್ ಕುಟುಂಬದ ನೋವಾಗಿ ಉಳಿದಿಲ್ಲ. ಇದು ಪುರುಷರ ಮೇಲಿನ ಸುಳ್ಳು ಆರೋಪಗಳ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ. ಪುರುಷರ ಹಕ್ಕುಗಳ ಸಂಘಟನೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೇರಳ ಹೈಕೋರ್ಟ್ ಮೆಟ್ಟಿಲೇರಿದೆ. ಸುಳ್ಳು ಆರೋಪ ಮಾಡಿ ಅಮಾಯಕರ ಜೀವದ ಜೊತೆ ಆಟವಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ದೇಶಾದ್ಯಂತ ಕೇಳಿಬರುತ್ತಿದೆ.

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram