Shimoga ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ
ಮಾಹಿತಿಯ ಪ್ರಕಾರ ಮದುವೆಯಾಗಿ ಒಂದೂವರೆ ವರ್ಷ ವಷ್ಟೆ ಆಗಿತ್ತು ಎಂದು ತಿಳಿದು ಬಂದಿದೆ 24 ವರ್ಷದ ಸಂಗೀತಾ ಮೃತ ಗೃಹಿಣಿ ಎಂದು ತಿಳಿದು
ಉಡುಗಣಿ ಗ್ರಾಮದ ಸಂಗೀತ ಮತ್ತು ಶಿರಾಳಕೊಪ್ಪದ ಹರೀಶ್ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಹುಡುಗಿಯ ತಂದೆ ಚಿನ್ನಾಭರಣ ಹಾಗೂ ಹಣವನ್ನು ವಿವಾಹದ ಸಂದರ್ಭದಲ್ಲಿ ವರದಕ್ಷಿಣೆಯಾಗಿ ನೀಡಿದ್ದರು.
ಗಂಡನ ಮನೆಯವರು ಆಗಾಗ ಹೆಚ್ಚಿನ ವರದಕ್ಷಿಣೆ ತರುವಂತೆ ಮೃತ ಸಂಗೀತಾಳಿಗೆ ಕಿರುಕುಳ ನೀಡುತ್ತಿದ್ದರು. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಗೀತ ಪೋಷಕರು ಆರೋಪಿಸಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅನಿಸಿದರೂ, ಮೃತಳ ದೇಹದ ಮೇಲೆ ಗಾಯಗಳಾಗಿವೆ. ಹೀಗಾಗಿ ಪತಿ ಹಾಗೂ ಆತನ ಕುಟುಂಬಸ್ಥರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂಬುದು ಸಂಗೀತ ಪೋಷಕರ ಆರೋಪವಾಗಿದೆ.
ಘಟನೆ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ಪತಿ ಹರೀಶ್ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರ ತನಿಖೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬಹಿರಂಗವಾಗಬೇಕಿದೆ.