ಶಿವಮೊಗ್ಗ: ಈದ್ ಮಿಲಾದ್ (Eid Milad) ಮೆರವಣಿಗೆ ಸಂದರ್ಭದಲ್ಲಿ ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಹಿಂದೂಗಳ ಮನೆ ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿರುವ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದ್ದಾರೆ.
ಅಲ್ಲದೇ, ಘಟನೆಗೆ ಸಂಬಂಧಿಸಿದಂತೆ 8 ಜನರು ತಲೆ ಮರೆಸಿಕೊಂಡಿದ್ದಾರೆ. 60 ಜನರನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ವಾಹನ ಯಾರದ್ದು, ವಾಹನದಲ್ಲಿ ಇದ್ದವರು ಯಾರು ಎಂದು ತನಿಖೆ ನಡೆಯುತ್ತಿದೆ. ಅವರನ್ನೆಲ್ಲ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.