ಶಿವಮೊಗ್ಗ: ಶಿವಮೊಗ್ಗ ಗಲಾಟೆಯ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನ ಅಮಾನತು ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಸಲ್ಲಿಸಿದ ವರದಿ ಆಧರಿಸಿ, ರಾಗಿಗುಡ್ಡ ಗಲಾಟೆ ನಿಭಾಯಿಸಲು ವಿಫಲವಾದ ಹಿನ್ನಲೆಯಲ್ಲಿ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಪೋಲಿಸ್ ಠಾಣಾಧಿಕಾರಿ ಅಭಯ ಪ್ರಕಾಶ್ ಸೇರಿ ಕಾನ್ಸ್ಟೇಬಲ್ಗಳಾದ ಕಾಶಿನಾಥ್, ರಂಗನಾಥ್ ಹಾಗೂ ಶಿವರಾಜ್ ಅವರನ್ನು ಅಮಾನತುಗೊಳಿಸಿದ್ದಾರೆ.
ಅ.1ರಂದು ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮಿಲಾದ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು.
ಉದ್ವಿಗ್ನ ಪರಿಸ್ಥಿತಿ ನಿಭಾಯಿಸಲು ತೆಗೆದುಕೊಂಡ 144 ಸೆಕ್ಷನ್ ಜಾರಿಯಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.