Shimoga | ತುಂಬಿ ಹರಿಯುತ್ತಿರುವ ಭದ್ರ ನದಿ.. ಸೇತುವೆ ಮುಳುಗಡೆ
ಶಿವಮೊಗ್ಗ : ಭದ್ರಾ ಜಲಾಶಯದಿಂದ ಯಥೇಚ್ಛವಾಗಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಭದ್ರಾ ನದಿ ತುಂಬಿ ಹರಿಯುತ್ತಿದೆ.
ಇದರಿಂದ ಭದ್ರಾವತಿ ಪಟ್ಟಣದ ಸೇತುವೆ ಮುಳುಗುವ ಹಂತದಲ್ಲಿದೆ. ನದಿ ತುಂಬಿ ಹರಿಯುತ್ತಿರುವುದರಿಂದ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದೆ.
ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.
ಸೇತುವೆ ಮೇಳೆ ನೀರು ಹರಿಯುತ್ತಿರುವುದರಿಂದ ಸೇತುವೆಯ ಎರಡೂ ಕಡೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಅಲ್ಲದೆ ಎರಡೂ ಕಡೆ ಪೊಲೀಸ್ ಸಿಬ್ಭಂದಿಯನ್ನು ನಿಯೋಜನೆ ಮಾಡಲಾಗಿದೆ.
ಇನ್ನು ನದಿ ಉಕ್ಕಿ ಹರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶದಲ್ಲಿನ ಜನರನ್ನು ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ.
ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಮಟ್ಟ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.
ಹೀಗಾಗಿ ತಗ್ಗು ಪ್ರದೇಶದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ನೆರೆ ಭೀತಿ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ನೆರೆ ಭೀತಿ ಪ್ರದೇಶಗಳಿಗೆ ಡಿಸಿ ಡಾ.ಸೆಲ್ವಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.