ಶಿವಮೊಗ್ಗ: ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದ ಹುಣಸೋಡು ಕಲ್ಲು ಕ್ವಾರೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ್ ನಾಯ್ಕ್, ಆಯನೂರು ಮಂಜುನಾಥ್ ಸಿಎಂಗೆ ಸಾಥ್ ನೀಡಿದರು.

ನಂತರ ಮಾತನಾಡಿದ ಬಿಎಸ್‍ವೈ, ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯನ್ನು ಹೈದರಾಬಾದ್ ಅಧಿಕಾರಿಗಳ ನೇತೃತ್ವದ ತಂಡ ತನಿಖೆ ನಡೆಸಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು. ಈ ಪ್ರಕರಣ ಕುರಿತು ಅಧಿಕಾರಿಗಳ ತನಿಖೆಯ ನಂತರ ಸತ್ಯ ತಿಳಿಯಬೇಕಿದೆ. ಪ್ರಕರಣದ ತನಿಖೆಯ ನಂತರ ಸಂಪೂರ್ಣ ಮಾಹಿತಿ ತಿಳಿಯಲಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು.

ಹೈದರಾಬಾದ್ ಅಧಿಕಾರಿಗಳ ಜತೆಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರ ನೇತೃತ್ವದಲ್ಲೂ ತನಿಖೆ ಮುಂದುವರೆಯಲಿದೆ. ಘಟನೆಯಲ್ಲಿ ಸ್ಫೋಟಕ ವಸ್ತುಗಳ ಮಾರಾಟ ಹಾಗೂ ಬಳಕೆ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಾದಲ್ಲೂ ತನಿಖೆ ಮುಂದುವರೆದಿದೆ ಎಂದು ವಿವರ ನೀಡಿದರು.

ಇಲ್ಲಿ ಕ್ರಷರ್‍ಗಳನ್ನು ನಡೆಸಲು ಅನುಮತಿ ಇದೆ. ಆದರೆ ಯಾರಿಗೂ ಕಲ್ಲುಗಣಿಗಾರಿಕೆಗೆ ಅನುಮತಿ ಇಲ್ಲ. ಈ ಪ್ರದೇಶ ಪರಿಸರ ಸೂಕ್ಷ್ಮ ವಲಯ ಆಗಿದ್ದು, ಮರುಪರೀಶೀಲನೆಗೆ ಸರ್ಕಾರಕ್ಕೆ ದೂರು ಬಂದಿದೆ. ಸರ್ಕಾರ ಮರುಪರಿಶೀಲನೆ ನಡೆಸುತ್ತಿದೆ. ಸಮಗ್ರ ತನಿಖೆ ನಂತರ ವಾಸ್ತವಿಕ ಸತ್ಯ ಗೊತ್ತಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಇದಕ್ಕೂ ಮೊದಲು ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲೈಸೆನ್ಸ್ ಇಲ್ಲದೆ ಗಣಿಗಾರಿಕೆಗೆ ಅವಕಾಶ ಇಲ್ಲ. ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಬೇಕು. ಜತೆಗೆ ರಸ್ತೆ, ಹೆದ್ದಾರಿ ಕಾಮಗಾರಿಗಳಿಗೆ ಜಲ್ಲಿ ಬೇಕು ಎಂದು ಅವರು, ಹುಣಸೋಡು ಸ್ಫೋಟದ ಬಗ್ಗೆ ವಾಸ್ತವ ಅರಿತು ಸಮಗ್ರ ತನಿಖೆ ಮಾಡ್ತೇವೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








