ಶಿವಮೊಗ್ಗ : 4 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತ ಬಾಣಂತಿ ಕುಟುಂಬಸ್ಥರು ಆಸ್ಪತ್ರೆ ಗಾಜು ಹೊಡೆದು ಆಕ್ರೋಶ ಹೊರಹಾಕಿದ್ದಾರೆ..
ಸರಿತಾ (27) ಮೃತಪಟ್ಟ ಬಾಣಂತಿಯಾಗಿದ್ದಾರೆ.. ಇವರು ಜೂ.18 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಭಾನುವಾರ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.. ಬಾಣಂತಿ ಸಾವಿಗೆ ಜಾಂಡೀಸ್ ಕಾರಣ ಎಂಬ ಮಾಹಿತಿ ಸಿಕ್ಕಿದೆ..