ಜಪಾನ್ : ತೀವ್ರ ಅನಾರೋಗ್ಯದ ಹಿನ್ನೆಲೆ ಜಪಾನ್ ನ ಪ್ರಧಾನಮಂತ್ರಿ ಶಿಂಜೋ ಅಬೆ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ನೀಡಿರುವ ರಾಜೀನಾಮೆ ಪತ್ರದಲ್ಲಿ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಪರಿಣಾಮ ಈ ಜವಾಬ್ದಾರಿಯುತ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಉಲ್ಲೇಖವಾಗಿರುವುದಾಗಿ ವರದಿಯಾಗಿದೆ.
2012ರಿಂದ ಜಪಾನ್ ದೇಶದ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಲಿಬರಲ್ ಡೆಮಾಕ್ರಾಟಿಕ್ ಪಕ್ಷದ ಅಧ್ಯಕ್ಷರೂ ಆಗಿರುವ ಶಿಂಜೋ ಅಬೆ ಅವರು ಹಲವು ವರ್ಷಗ್ಗಳಿಂದಲೂ ಸಹ ದೊಡ್ಡ ಕರುಳಿನ ತೀವ್ರ ಉರಿಯೂತ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚಿಗೆ ಈ ಸಮಸ್ಯೆ ಹೆಚ್ಚಾಗಿದ್ದು, ಅನಾರೋಗ್ಯದ ಪರಿಣಾಮ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.