shira
ತುಮಕೂರು : ನವೆಂಬರ್ 3 ರಂದು ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಇಂದು ಮುಂಜಾನೆಯಿಂದಲೇ ಎರೆಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಭಾರೀ ಕುತೂಹಲ ಮೂಡಿಸಿದೆ. ಇತ್ತ ಶಿರಾದಲ್ಲಿ ಉಪಚುನಾವಣೆಯ 6ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡು, 7ನೇ ಸುತ್ತಿನ ಮತಏಣಿಕೆ ಕಾರ್ಯ ಮುಂದುವರೆದಿದೆ. 6ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಅಲ್ಪ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆಯನ್ನು ಸಾಧಿಸಿದ್ದಾರೆ.
ರಾರಾ ಕ್ಷೇತ್ರದಲ್ಲಿ ಕಮಲಕ್ಕೆ ಮುನ್ನಡೆ : ಶಿರಾದಲ್ಲಿ ಭಾರಿ ಪೈಪೋಟಿ
ಶಿರಾ ಉಪ ಚುನಾವಣೆಯ 6ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ 16,909 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ 15,515 ಮತಗಳನ್ನು ಪಡೆದಿದ್ದರೇ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 10,348 ಮತಗಳನ್ನು ಪಡೆದಿದ್ದಾರೆ. ಈ ಮೂಲಕ 1,394 ರಷ್ಟು ಮತಗಳಿಂದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಮುನ್ನಡೆಯನ್ನು ಸಾಧಿಸಿದ್ದಾರೆ.
shira
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel