ಶಿರಾಡಿ | ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು Shiradi saaksha tv
ದಕ್ಷಿಣ ಕನ್ನಡ : ಕಾರಿನ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ನಡೆದಿದೆ.
ಕಾರು ಚಾಲಕ ಸುರೇಶ್ ಮೃತ ವ್ಯಕ್ತಿಯಾಗಿದ್ದಾರೆ. ಘಟನೆಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಸುರೇಶ್ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಬಾನೆಟ್ ತೆಗೆದು ಪರಿಶೀಲನೆ ನಡೆಸುತ್ತಿದ್ದರು.
ಅದೇ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರವು ಅವರ ಮೇಲೆ ಬಿದ್ದಿದೆ.
ಮರ ಬಿದ್ದ ರಭಸಕ್ಕೆ ಸುರೇಶ್ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ