ಶಾಸಕರ ಬೆವರಿಳಿಸಿದ ಸಾರ್ವಜನಿಕರು!
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಘಟನೆ
ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಘೇರಾವ್
ಶಿರೋಳ ಗ್ರಾಮಸ್ಥರಿಂದ ಶಾಸಕರಿಗೆ ಕ್ಲಾಸ್
ರಸ್ತೆ, ಸೇತುವೆ ನಿರ್ಮಾಣ ಮಾಡುವಂತೆ ಮನವಿ
ಗದಗ :ಚುನಾವಣೆ ವೇಳೆ ಬಿಟ್ಟಿ ಭರವಸೆ ಕೊಟ್ಟು ಮತ ಪಡೆದು ಗೆದ್ದು, ಕೆಲಸ ಮಾಡದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಸಾರ್ವಜನಿಕರು ಬೆವರಿಳಿಸಿದ್ದಾರೆ.
ಮಂಡರಗಿ ತಾಲೂಕಿನ ಶಿರೋಳ ಗ್ರಾಮಸ್ಥರ ಶಾಸಕರಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಶಿರೋಳ ಗ್ರಾಮಸ್ಥರು ಕಳೆದ ಮೂರು ವರ್ಷಗಳಿಂದ ಗ್ರಾಮದ ರಸ್ತೆ ದುರಸ್ತಿ ಹಾಗೂ ಸೇತುವೆ ನಿರ್ಮಾಣ ಮಾಡುವಂತೆ ಹಲವು ಬಾರಿ ಶಾಸಕರಿಗೆ ಮನವಿ ಮಾಡಿದ್ದಾರೆ.
ಇದಕ್ಕೆ ಶಾಸಕ ರಾಮಣ್ಣ ಲಮಾಣಿ ಕೇವಲ ಭರವಸೆ ಕೊಟ್ಟು ಸುಮ್ಮನಾಗುತ್ತಿದ್ದರಂತೆ.
ಆದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶನಿವಾರ ಶಾಸಕರ ಕಾರಿಗೆ ಮುತ್ತಿಗೆ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಶಾಸಕರ ಬೆಂಬಲಕ್ಕೆ ಬಿಜೆಪಿ ಮುಖಂಡರು ಬಂದಿದ್ದೂ ಅವರಿಗೂ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಕೊನೆಗೆ ಶಾಸಕರೇ ಮುಂದಿನ 2 ತಿಂಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮತ್ತೆ ಭರವಸೆ ನೀಡಿದ್ದಾರೆ.