ಬೆಳಗಾವಿಯಲ್ಲಿ ಸೆಕ್ಷನ್ 144 ಸೆಕ್ಷನ್ ಜಾರಿ….ಪೊಲೀಸ್ ಬಂದೋಬಸ್ತ್
ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕಾರಣ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಕಾರಣ ಬೆಳಗಾವಿ ಹೊತ್ತಿ ಉರಿಯುತ್ತಿದೆ…. ಬೆಳಗಾವಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಸಿಲಾಗಿದೆ.
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿಮೆಯನ್ನು ಮರು ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿ ತಿಲಕವಾಡಿ ಪೊಲೀಸ್ ಠಾಣೆ ಎದುರು ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಠಾಣೆ ಸುತ್ತಲಿನ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಶಿವಾಜಿ ಮಹರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಕಾರಣಕ್ಕೆ ತಪ್ಪಿತಸ್ಥರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯ ಸಾಂಭಾಜಿ ವೃತ್ತದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು….
20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಪೊಲೀಸ್ ಮತ್ತು ಸರ್ಕಾರಿ ಜೀಪ್ ಗಳು ಹಾನಿಗೊಳಗಾಗಿವೆ.