Shivamogga : ಹಾಸ್ಟೆಲ್ ಊಟ ಸೇವಿಸಿ 50 ಮಕ್ಕಳು ಅಸ್ವಸ್ಥ – ಆಸ್ಪತ್ರೆಯಲ್ಲಿ ಚಿಕಿತ್ಸೆ….
ಸೋಮವಾರ ಮಧ್ಯಾಹ್ನ ಹಾಸ್ಟೆಲ್ ಊಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದಿದೆ.
ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರಂತೆ ಒಟ್ಟು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ . ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುತ್ತಿದ್ಧಾರೆ.
ಸುಮಾರು 250ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.
ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿದ್ದಾರೆ. ಶಾಲೆಯ ಶಿಕ್ಷಕ ವೃಂದ ಮೆಗ್ಗಾನ್‌ನಲ್ಲಿ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದು ಮಕ್ಕಳ ತಪಾಸಣೆಯಲ್ಲಿ ನೆರವಾಗುತ್ತಿದ್ದಾರೆ. ಚಿಕಿತ್ಸೆ ಬಳಿಕ ಹಲವು ವಿದ್ಯಾರ್ಥಿಗಳು ಪುನಃ ವಸತಿ ಶಾಲೆಗೆ ಹಿಂತಿರುಗಿದ್ದಾರೆ.
Shivamogga : 50 children sick after eating hostel food – treated in hospital….