ಬೆಂಗಳೂರು: ಸತತ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹತ್ವಾಕಾಂಕ್ಷೆಯ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಲನೆ ನೀಡಿದರು.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆ ಸಮಾರಂಭವನ್ನು ಆನ್‍ಲೈನ್ ಮೂಲಕ ಉದ್ಘಾಟನೆ ನೆರವೇರಿಸಿದರು.
ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿಯ ಉದ್ಘಾಟನೆಯನ್ನು ಬಿಎಸ್‍ವೈ ನೆರವೇರಿಸಿದರು.
ಡಿಸಿಎಂ ಗೋವಿಂದ ಎಂ. ಕಾರಜೋಳ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ರಿಕೆಟ್ ದಿಗ್ಗಜ ಯುವಿ ಗೆ ಭಜ್ಜಿಯಿಂದ ವಿಶೇಷ ಜನ್ಮದಿನದ ಶುಭಾಶಯ!
ಭಾರತದ ಕ್ರಿಕೆಟ್ ದಿಗ್ಗಜ ಯುವರಾಜ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಕ್ರಿಕೆಟ್ ಲೋಕದ ಗಣ್ಯರು, ಮತ್ತು ಸಹ ಆಟಗಾರರು ಶುಭಾಶಯ ಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ, ಅವರ ಸ್ನೇಹಿತ...