shivamogga | ಹಿಂದೂ ಕಾರ್ಯಕರ್ತ ಹತ್ಯೆ : ಕಟೀಲ್ ಹೇಳಿದ್ದೇನು..?
ಬೆಂಗಳೂರು : ಶಿವಮೊಗ್ಗದಲ್ಲಿ ಹಿಂದೂಪರ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಸದ್ಯ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಖಂಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ.
ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಸನ್ಮಾನ ಸಿಎಂ ನಳಿನ್ ಕುಮಾರ್ ಕಟೀಲ್ ಹಾಗೂ ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಅವರಲ್ಲಿ ಮನವಿ ಮಾಡುತ್ತೇನೆ.
ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇತ್ತ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ, ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ಖಂಡನೀಯ. ಈ ಕೃತ್ಯದ ಹಿಂದಿರುವ ಸಮಾಜ ವಿರೋಧಿ ಶಕ್ತಿಗಳನ್ನು ಸರ್ಕಾರ ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದೆ. shivamogga- Bajrang Dal Activist Murder katil reaction saaksha tv









