Shivamogga | ಭದ್ರಾ ಜಲಾಶಯ ಸಂಪೂರ್ಣ ಭರ್ತಿ
ಶಿವಮೊಗ್ಗ : ಮಲೆ ನಾಡು ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಶಿವಮೊಗ್ಗದಲ್ಲಿ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ.
ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಡ್ಯಾಂ ನ ನೀರಿನಮಟ್ಡ 183 ಅಡಿಗೆ ಏರಿಕೆಯಾಗಿದೆ.

ಗರಿಷ್ಠ 186 ಅಡಿ ನೀರಿನ ಮಟ್ಟ ಹೊಂದಿರುವ ಭದ್ರಾ ಡ್ಯಾಂಗೆ 43 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ 183 ಅಡಿಗೆ ಏರಿಕೆಯಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಡ್ಯಾಂ ನಿಂದ ನದಿಗೆ ನೀರು ಹರಿಸಲಾಗುತ್ತಿದೆ.
ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಸೂಚಿಸಿದ್ದಾರೆ.