ಶಿವಮೊಗ್ಗದ ಹುಣಸೋಡು ಕ್ರಷರ್ ಸ್ಫೋಟ: ಇಂದು ಸಿಎಂ ಯಡಿಯೂರಪ್ಪ ಸ್ಥಳಕ್ಕೆ ಭೇಟಿ..!

1 min read
bsy

ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ಗುರುವಾರ ರಾತ್ರಿ ಜೆಲ್ಲಿ ಕ್ರಷರ್‍ನಲ್ಲಿ ನಡೆದ ಜಿಲೆಟಿನ್ ಸ್ಫೋಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಡೆದ ಈ ಸ್ಫೋಟ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕ್ರಷರ್‍ನಲ್ಲಿ 50 ಜಿಲೆಟಿನ್‍ಗಳು ಒಂದೇ ಸಮಯಕ್ಕೆ ಸ್ಫೋಟಗೊಂಡ ಪರಿಣಾಮ 5 ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ್ದು, ನೂರು ಕಿ.ಮೀ ಹೆಚ್ಚು ದೂರದವರೆಗೆ ಸ್ಫೋಟದ ಸದ್ದು ಕೇಳಿಸಿತ್ತು.

blast
ಕ್ರಷರ್ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದು, ಮತ್ತೆ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆಯಷ್ಟೇ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಹುಣಸೋಡು ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ತಮ್ಮ ತವರು ಜಿಲ್ಲೆಯಲ್ಲೇ ಈ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ತೆರಳಿದ್ದಾರೆ. ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿರುವ ಮುಖ್ಯಮಂತ್ರಿಗಳು ನೇರವಾಗಿ ಹುಣಸೋಡಿಗೆ ತೆರಳಿ ಸ್ಫೋಟಕ್ಕೆ ಕಾರಣ ಏನು ಎಂಬುದರ ಪರಿಶೀಲನೆ ನಡೆಸಿದಲಿದ್ದಾರೆ. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆ ಇದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd