Shivamogga | ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು
ಶಿವಮೊಗ್ಗ : ವೀರ ಸಾವರ್ಕರ್ – ಟಿಪ್ಪು ಫ್ಲೆಕ್ಸ್ ವಿವಾದ ಪಕರಣದಲ್ಲಿ ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಜಾವ 4 ಗಂಟೆಗೆ ಗುಂಡಿನ ಸದ್ದು ಕೇಳಿದೆ.
ಸದ್ಯ ಶಿವಮೊಗ್ಗ ಬೂದಿ ಮುಚ್ಚಿದ ಕೆಂಡದಂತಾಗಿದೆ. ಪ್ರೇಮ್ ಸಿಂಗ್ ಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳ ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿ ಜಬೀವುಲ್ಲಾ ಕಿಡಿಗೇಡಿ ಚಾಕು ತೋರಿಸಿ ಬೆದರಿಸಿದ್ದಾನೆ.
ಆಗ ದುಷ್ಕರ್ಮಿಗೆ ಬಿಸಿ ಮುಟ್ಟಿಸಿಲು ಜಬೀವುಲ್ಲಾನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಗಲಾಟೆ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದ ಪ್ರಕರಣ ಸಂಬಂಧ ನದೀಮ್, ಅಬ್ದುಲ್ ರೆಹಮಾನ್ ಎಂಬುವವರನ್ನು ಬಂಧಿಸಲಾಗಿದೆ.
ಇನ್ನುಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರ ಪ್ರದೇಶದಲ್ಲಿ ಆಗಸ್ಟ್ 18 ರವೆರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಹಾಗೂ ಭದ್ರಾವತಿ ನಗರದ ವ್ಯಾಪ್ತಿಯ ಶಾಲಾ – ಕಾಲೇಜುಗಳಿಗೆ ಕುವೆಂಪು ವಿವಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆಗಾಗಿ 10 ಕೆಎಸ್ ಆರ್ ಪಿ, 10 ಡಿಎಆರ್ ಹಾಗೂ ಆರ್ ಎ ಎಫ್ ತುಕಡಿ ಜಿಲ್ಲೆಗೆ ಆಗಮಿಸಿದೆ.