Shivamogga | ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು
ಶಿವಮೊಗ್ಗ: 4 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
27 ವರ್ಷದ ಸರಿತಾ ಮೃತಪಟ್ಟ ಬಾಣಂತಿ.
ವೈದ್ಯರ ನಿರ್ಲಕ್ಷ್ಯದಿಂದ ಸರಿತಾ ಮೃತಪಟ್ಟಿದ್ದಾರೆ ಎಂದು ಮೃತ ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಲ್ಲದೆ ಆಸ್ಪತ್ರೆ ಗಾಜು ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ಸರಿತಾ ಜೂನ್ 18 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.
ಭಾನುವಾರ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದರು.








