ವಾಷಿಂಗ್ಟನ್: ಡಾ. ಶಿವರಾಜಕುಮಾರ್ (Shiva Rajkumar) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಗಿದಿದ್ದು, ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈಗ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ. ಮುರುಗೇಶ್ ಮನೋಹರನ್ (Murugesh Manoharan) ಹೇಳಿದ್ದಾರೆ.
ಶಸ್ತ್ರ ಚಿಕಿತ್ಸೆಯ ನಂತರ ವೀಡಿಯೋ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಈಗಾಗಲೇ ಶಿವಣ್ಣ ಅವರ ಪ್ರಮುಖ ಹಂತ ಪೂರ್ಣಗೊಂಡಿದೆ. ಶಸ್ತ್ರ ಚಿಕಿತ್ಸೆಗೆ ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.
ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ ಎಂದು ಕೂಡ ವೈದ್ಯರು ಹೇಳಿದ್ದಾರೆ.








