ನಟ ಶಿವಣ್ಣ (Shivarajkumar) ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್‌ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವಣ್ಣ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್‌ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್‌ಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಸಿಎಂ ಹಾರೈಸಿದ್ದಾರೆ.
ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ
ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....








