ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ (Niveditha) ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಫೈರ್ ಫ್ಲೈ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಲು ಮುಂದಾಗಿದ್ದಾರೆ.
ಈಗಾಗಲೇ ಚಿತ್ರದ ಮೊದಲ ಹಾಗೂ ದ್ವಿತೀಯ ಹಂತದ ಚಿತ್ರೀಕರಣ ಮುಗಿದ್ದದು, ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಯುವ ನಟ ವಂಶಿ ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.