‘ಆಸರೆ’ ಹಸಿದ ಹೊಟ್ಟೆಗೆ ಕೈ ತುತ್ತು…. ಪುಣ್ಯದ ಕೆಲಸ ಮಾಡ್ತಿರುವ ಶಿವಣ್ಣ ಬಾಯ್ಸ್..!
ಬೆಂಗಳೂರು : ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವ ಜನರ ಸಹಾಯಕ್ಕೆ ಧಾವಿಸಿದ್ದಾರೆ. ನಾಗವಾರದ ಸುತ್ತಮುತ್ತ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ‘ಆಸರೆ’ ಎಂಬ ಹೆಸರಿನಲ್ಲಿ ಸಹಾಯ ಮಾಡ್ತಿದ್ದಾರೆ..
ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ 500 ಜನರಿಗೆ ಊಟ, ತಿಂಡಿ, ಹಾಗೂ ಟೀ ವ್ಯವಸ್ಥೆಯನ್ನ ಮಾಡಿದ್ದಾರೆ. ಈ ಕೆಲಸಕ್ಕಾಗಿ ಶಿವರಾಜ್ ಕುಮಾರ್ ಅವರು ಬೊಲೆರೊ ಕ್ಯಾಂಟ್ರೋನ ವ್ಯವಸ್ಥೆ ಮಾಡಿದ್ದಾರೆ. ಇದೇ ಈ ವಾಹನದಲ್ಲೇ ಊಟ ತಿಂಡಿ ಸರಬರಾಜು ಆಗುತ್ತಿದೆ.
‘ಆಸರೆ’ ಹಸಿದ ಹೊಟ್ಟೆಗೆ ಕೈ ತುತ್ತು ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ, ಸದ್ಯ 10 ದಿನದವರೆಗೂ ಮುಂದುವರೆಯಲಿದೆ. ಲಾಕ್ ಡೌನ್ ಹೀಗೆ ಮುಂದುವರೆದಲ್ಲಿ ಸುಮಾರು 1000 ಜನಕ್ಕೆ ಪ್ರತಿ ದಿನ ಅನ್ನ ದಾಸೋಹ ಮಾಡುವುದಕ್ಕೆ ಶಿವಣ್ಣ, ಗೀತಾ ಶಿವಣ್ಣ ಹಾಗೂ ಶಿವಣ್ಣ ಬಾಯ್ಸ್ ಯೋಜನೆ ರೂಪಿಸಿಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








