Sandalwood : ಥಿಯೇಟರ್ ಗಳ 50:50 ರೂಲ್ಸ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸ್ಯಾಂಡಲ್ ವುಡ್ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಮೈಸೂರಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು,.. ಈ ವೇಳೆ ಸಿನಿಮಾ ಮಂದಿರಗಳಿಗೆ ಕೋವಿಡ್ 50:50 ರೂಲ್ಸ್ ವಿಚಾರವಾಗಿ ಮಾತನಾಡಿ , ನಿನ್ನೆಯಷ್ಟೇ ನಾನು ಈ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ನಾವು ಕೊರೊನಾದ ಜೊತೆ ಜೊತೆಗೆ ಬದುಕಬೇಕಿದೆ.
ಅದರ ಜೊತೆಗೆ ಬದುಕಬೇಕಾದ ಅನಿವಾರ್ಯತೆ ಇದೆ. ಎಲ್ಲ ಕ್ಷೇತ್ರಗಳಿಗೂ 50:50 ರೂಲ್ಸ್ ನಿಂದ ರಿಲ್ಯಾಕ್ಸ್ ಕೊಡಲಾಗಿದೆ. ಆದರೆ ಸಿನಿಮಾ ಮಂದಿರಗಳಿಗೆ ಯಾಕೆ ರಿಲ್ಯಾಕ್ಸ್ ಕೊಟ್ಟಿಲ್ಲ ಎಂದು ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ನಮಗೆ ಸಾಕಷ್ಟು ಬಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗಲೂ ನಮಗೆ ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ..
Sandalwood : ಅಪ್ಪು ನಿಧನದ ನೋವನ್ನ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ : ಶಿವಣ್ಣ
Shivarajkumar reacts on theaters 50 : 50 rules in mysore