ಗಂಜೀ ಕಾಸಿನ ಆಸೆಗೆ ಹೇಳಿಕೆ : ಚೇತನ್ ಬಂಧನಕ್ಕೆ ಹೆಬ್ಬಾರ್ ಆಗ್ರಹ
ಬೆಂಗಳೂರು : ನಟ ಚೇತನ್ ಅವರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಸಚಿವ ಶಿವರಾಂ ಹೆಬ್ಬಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ.
ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು.
ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.