ಹಿರಿಯ ನಟ ಶಿವರಾಂ ನಿಧನ : ಸಿಎಂ ಬೊಮ್ಮಾಯಿ ಸಂತಾಪ
ಬೆಂಗಳೂರು : ಚಂದನವನದ ಹಿರಿಯ ಕಲಾವಿದ ಶಿವರಾಂ ಅವರು ನಿಧನ ಹೊಂದಿದ್ದಾರೆ.. ಮೆದುಳಿನ ರಕ್ತಸ್ರಾವದಿಂದ ನಗರದ ಬ್ಯಾಂಕ್ ಕಾಲೋನಿಯಲ್ಲಿನ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತದ್ದ ಶಿವರಾಮ್ ಅವರು ಕಡೆಗೆ ಕೋಮಾ ತಲುಪಿದ್ದರು.. ಇದೀಗ ಆಸ್ಪತ್ರೆಯಲ್ಲೇ ಇಂದು ಕೊನೆಯುಸಿರೆಳೆದಿದ್ದಾರೆ.. ಶಿವರಾಮ್ ಅವರ ನಿಧನಕ್ಕೆ ಇಡೀ ಸ್ಯಾಂಡಲ್ ಕಂಬನಿ ಮಿಡಿದಿದೆ.. ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 83 ವರ್ಷದ ಶಿವರಾಮ್ ಅವರು ನಿಧನರಾಗಿದ್ದಾರೆ.
ಶಿವರಾಮ್ ಅವರಿಗೆ ರಾಜಕೀಯ ಮುಖಂಡರು , ಗಣ್ಯರು , ಸ್ಯಾಂಡಲ್ ವುಡ್ ನವರು ಸಂತಾಪ ಸೂಚಿಸುತ್ತಿದ್ದಾರೆ.. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು “ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ “ ಎಂದು ಸಂತಾಪ ಸೂಚಿಸಿದ್ದಾರೆ.








